ಬರ್ತ್ಡೇಗೆ ಹೆಚ್ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಕುಮಾರಸ್ವಾಮಿ ಹುಟ್ಟುಹಬ್ಬ: ಕೇಂದ್ರ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಜನಸಂದಣಿಯ ನಡುವೆ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು. ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
ಮಂಡ್ಯ, ಡಿಸೆಂಬರ್ 16: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಭಾರಿ ಜನಸಂದಣಿ ನೆರೆದಿತ್ತು, ಜನರು ತಮ್ಮ ನೆಚ್ಚಿನ ನಾಯಕನಿಗೆ ಜೈಕಾರ ಕೂಗುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ‘‘ಕುಮಾರಣ್ಣನಿಗೆ ಜೈ’’ ಎಂಬ ಘೋಷಣೆಗಳು ಮೊಳಗಿದವು. ಈ ಸಂಭ್ರಮದ ನಡುವೆ, ಕುಮಾರಸ್ವಾಮಿ ಅವರು ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಇದೇ ವೇಳೆ ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆಯಾಗಿ ನೀಡಿ ತೊಡಿಸಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್ಲೈನ್ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
