ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

Edited By:

Updated on: Dec 16, 2025 | 1:24 PM

ಕುಮಾರಸ್ವಾಮಿ ಹುಟ್ಟುಹಬ್ಬ: ಕೇಂದ್ರ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಜನಸಂದಣಿಯ ನಡುವೆ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು. ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

ಮಂಡ್ಯ, ಡಿಸೆಂಬರ್ 16: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಭಾರಿ ಜನಸಂದಣಿ ನೆರೆದಿತ್ತು, ಜನರು ತಮ್ಮ ನೆಚ್ಚಿನ ನಾಯಕನಿಗೆ ಜೈಕಾರ ಕೂಗುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ‘‘ಕುಮಾರಣ್ಣನಿಗೆ ಜೈ’’ ಎಂಬ ಘೋಷಣೆಗಳು ಮೊಳಗಿದವು. ಈ ಸಂಭ್ರಮದ ನಡುವೆ, ಕುಮಾರಸ್ವಾಮಿ ಅವರು ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಇದೇ ವೇಳೆ ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆಯಾಗಿ ನೀಡಿ ತೊಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More