AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ರಾಮ್​, ಮೈಸೂರು
| Edited By: |

Updated on: Apr 10, 2026 | 2:24 PM

Share

ಜೆಡಿಎಸ್‌ ಪಕ್ಷವನ್ನು ಅವಮಾನಿಸಿ ಮಾತನಾಡುವ ಸಿಎಂ ಸಿದ್ದರಾಮಯ್ಯ, ಹಿಂದೆ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡಿದ್ದರು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ಜೆಡಿಎಸ್‌ನಲ್ಲಿ ಅವರ ಹಿಂದಿನ ಪಾತ್ರ, ಚುನಾವಣಾ ಫಲಿತಾಂಶಗಳು ಮತ್ತು ಪಕ್ಷ ತೊರೆದ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಿದ್ದರಾಮಯ್ಯನವರು ಜೆಡಿಎಸ್ ತೊರೆದಾಗ ಕೆಲವೇ ಶಾಸಕರು ಅವರ ಜೊತೆ ಇದ್ದರು ಎಂದು ಕುಮಾರಸ್ವಾಮಿ ನೆನಪಿಸಿದ್ದಲ್ಲದೆ, ಕಾಂಗ್ರೆಸ್ ಬಿಟ್ಟು ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವಂತೆ ಸವಾಲು ಹಾಕಿದ್ದಾರೆ.

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More