‘ನಿಮ್ಮಪ್ಪಂದಾ ಇಲಾಖೆ, ತಾಕತ್ತಿದ್ರೆ ನನ್ನ ಅರೆಸ್ಟ್ ಮಾಡ್ಸು’: ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ

Updated on: Oct 15, 2026 | 12:56 PM

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿ ಅಕ್ರಮದ ಬಗ್ಗೆ ಸರ್ಕಾರದ ಮೌನ ಪ್ರಶ್ನಿಸಿರುವ ಅವರು, ಅಧಿಕಾರ ದುರ್ಬಳಕೆಯ ಆರೋಪ ಮಾಡಿದ್ದಾರೆ. ‘ನನ್ನನ್ನು ಬಂಧಿಸಿ, ರಾಜ್ಯ ಏನಾಗುತ್ತೆ ನೋಡೋಣ. ನಾನು ಹೋರಾಟಕ್ಕೆ ಸಿದ್ಧನಿದ್ದೇನೆ’ ಎಂದು ಗೃಹ ಸಚಿವರಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರು, ಅಕ್ಟೋಬರ್ 15: ಸ್ಟಿಂಗ್ ಆಪರೇಷನ್ ಆರೋಪ ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದು, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಅಗತ್ಯಬಿದ್ದರೆ ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಾಚಾಮಗೋಚರ ತಿರುಗೇಟು ನೀಡಿರುವ ಕುಮಾರಸ್ವಾಮಿ, ‘ಉತ್ತರ ಕೊಡೋದಕ್ಕೆ ಆಗಲ್ವಂತೆ, ಯಾತಕ್ಕೆ ಮತ್ತೆ ಇರೋದು ಸರ್ಕಾರ?’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಟಿಂಗ್ ಆಪರೇಷನ್‌ನಲ್ಲಿ ಶಾಮೀಲಾದ ರಾಕೇಶ್ ಶೆಟ್ಟಿ ಮತ್ತು ಕೃಪಾಳ್ ಅವರನ್ನು ಪ್ರಶ್ನಿಸದೆ, ತಮ್ಮ ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸುತ್ತಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ನೇರವಾಗಿ ಸವಾಲು ಹಾಕಿದ್ದು, ‘ನೀವು ಪಾರದರ್ಶಕ ತನಿಖೆ ಮಾಡುತ್ತೀರಾ ತಾನೆ? ನನ್ನ ಮೇಲೆ ಸಂಶಯ ಬಂದ್ರೆ ನನ್ನನ್ನೂ ಕರಿಸ್ಬೇಕಾಗುತ್ತದೆ ಅಂದಿದ್ದೀರಿ. ಕರಿಸ್ಬೇಡಪ್ಪ, ನಾನೇ ಬರ್ತೀನಿ ಈಗ ನಿನ್ ಕಚೇರಿಗೆ, ನನ್ನ ಅರೆಸ್ಟ್ ಮಾಡ್ಸು ನೋಡೋಣ. ರಾಜ್ಯ ಏನಾಗುತ್ತೆ ನೋಡೋಣ’ ಎಂದು ಸವಾಲೆಸೆದರು. ಸಿಎಂ ಡಿ.ಕೆ. ಶಿವಕುಮಾರ್ ಅವರ ಫೋನ್ ಅನ್ನು ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More