ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ

Updated on: Apr 19, 2026 | 2:10 PM

ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ. ಇತ್ತೀಚೆಗೆ ಖಾಸಗಿ ಹೋಟೆಲ್​​ನಲ್ಲಿ ಜಮೀರ್ ಅಹ್ಮದ್ ಖಾನ್ ಹಾಗೂ ಕುಮಾರಸ್ವಾಮಿ ಭೇಟಿಯಾಗಿದ್ದು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಜಮೀರ್ ಮುಂದಿನ ದಿನಗಳಲ್ಲಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಇನ್ನು ಇದಕ್ಕೆ ಮೊನ್ನೆ ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us