ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್‌ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

Edited By:

Updated on: Jul 31, 2026 | 12:53 PM

Cauvery Water Dispute: ಕಾವೇರಿ ನೀರು ಹಂಚಿಕೆ ಕುರಿತು CWMA ಆದೇಶವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಜಲಾಶಯಗಳ ನೀರಿನ ಪ್ರಮಾಣ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಹಾಸನ, ಜುಲೈ 31: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀರು ಬಿಡುವಂತೆ ನೀಡಿರುವ ಆದೇಶದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವನ್ನು ದೆಹಲಿಯ AC ರೂಮ್‌ಗಳಲ್ಲಿ ಕೂತು ತೆಗೆದುಕೊಳ್ಳುವ ಬದಲು, CWMA ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧರಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಲಭ್ಯವಿರುವ 54-55 ಟಿಎಂಸಿ ನೀರಲ್ಲಿ, 10 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ 44 ಟಿಎಂಸಿಯಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿಗಾಗಿ 30 ಟಿಎಂಸಿ ಮತ್ತು ಪರಿಸರ ಸಂರಕ್ಷಣೆಗೆ 10 ಟಿಎಂಸಿ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ, ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 31, 2026 12:52 PM
Loading...
Unable to load recommendations.
Follow Us