ಹೊಸ ಸಂಪುಟದಿಂದ ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದು ಯಾವ ಸಚಿವಗೆ? ಯಾಕೆ?
ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದರು.
ನಾಗಮಂಗಲ KSRTC ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ KSRTC ಚಾಲಕ ಜಗದೀಶ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ತನ್ನ ಡೆತ್ನೋಟ್ನಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ ಈವರೆಗೂ ಎಫ್ಐಆರ್ ದಾಖಲಾಗಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಇನ್ನು ನಾಗಮಂಗಲ KSRTC ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ ಡೆತ್ನೋಟ್ನಲ್ಲಿ ಎನ್. ಚಲುವರಾಯಸ್ವಾಮಿ ಹೆಸರು ಪ್ರಸ್ತಾಪ ವಿಚಾರವಾಗಿ ವಿಧಾನಸೌಧದ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ, ಅಧಿಕಾರಿಗಳ ಮೂಲಕ ತಿಳಿದುಕೊಳ್ಳುತ್ತೇನೆ. ಆತನ ಪತ್ನಿ ಪಂಚಾಯಿತಿ ಸದಸ್ಯೆ, ಅಧ್ಯಕ್ಷರಾಗಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜಕೀಯ ಇರಬಹುದು ಎಂಬುದು ನನಗೆ ಅನಿಸುತ್ತದೆ ಎಂದಿದ್ದಾರೆ.
Published on: Jul 06, 2023 01:42 PM
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
