ಹೊಸ ಸಂಪುಟದಿಂದ ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದ್ದು ಯಾವ ಸಚಿವಗೆ? ಯಾಕೆ?

ಸಾಧು ಶ್ರೀನಾಥ್​

Updated on: Jul 06, 2023 | 1:43 PM

ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್​​ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ KSRTC ಚಾಲಕ ಜಗದೀಶ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ತನ್ನ ಡೆತ್​ನೋಟ್​​ನಲ್ಲಿ ಸಚಿವ ಎನ್​​ ಚಲುವರಾಯಸ್ವಾಮಿ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ ಈವರೆಗೂ ಎಫ್​​ಐಆರ್ ದಾಖಲಾಗಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್​​ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಇನ್ನು ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ ಡೆತ್​ನೋಟ್​​ನಲ್ಲಿ ಎನ್​. ಚಲುವರಾಯಸ್ವಾಮಿ ಹೆಸರು ಪ್ರಸ್ತಾಪ ವಿಚಾರವಾಗಿ ವಿಧಾನಸೌಧದ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ, ಅಧಿಕಾರಿಗಳ ಮೂಲಕ ತಿಳಿದುಕೊಳ್ಳುತ್ತೇನೆ. ಆತನ ಪತ್ನಿ ಪಂಚಾಯಿತಿ ಸದಸ್ಯೆ, ಅಧ್ಯಕ್ಷರಾಗಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜಕೀಯ ಇರಬಹುದು ಎಂಬುದು ನನಗೆ ಅನಿಸುತ್ತದೆ ಎಂದಿದ್ದಾರೆ.

Published on: Jul 06, 2023 01:42 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು