ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್‌ಗೆ ವಾಪಸಾಗುತ್ತಾರೆ ಎಂಬ ಊಹಾಪೋಹಗಳನ್ನ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಅದೆಲ್ಲವೂ ಗಾಳಿ ಸುದ್ದಿ ಎಂದು ಹೇಳುವ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ. ಅಲ್ಲದೇ ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಹಾಸನ, (ಏಪ್ರಿಲ್ 23): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election) ಟಿಕೆಟ್ ವಿಚಾರವಾಗಿ ಕಾಂಗ್ರೆಸ್ನಲ್ಲಿ (Congress) ಶುರುವಾದ ಅಸಮಾಧಾನ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ ಹಾಗೂ ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪ್ರಚಾರವೇ ಮಾಡಿರಲಿಲ್ಲ. ಇದರಿಂದ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿದರೆ, ನಸೀರ್ ಅಹದ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಜಮೀರ್ ವಿರುದ್ಧವೂ ಕ್ರಮಕ್ಕೆ ಚಿಂತನೆಗಳು ನಡೆದಿವೆ. ಈ ಸಂಬಂಧ ಜಮಿರ್ ಅಹ್ಮದ್ ಖಾನ್ ಕಾಂಗ್ರೆಸ್ ತೊರೆದು ವಾಪಸ್ ಜೆಡಿಎಸ್ನತ್ತ ಮುಖ ಮಾಡುತ್ತಾರೆ ಎನ್ನುವ ಚರ್ಚೆಗಳು ಜೋರಾಗಿವೆ. ಆದ್ರೆ, ಇದನ್ನು ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ, ಅಲ್ಲಗಳೆದಿದಿದ್ದಾರೆ.
ಈ ಬಗ್ಗೆ ಮತ್ತೊಮ್ಮೆ ಹಾಸನದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಆ ವಿಷಯವನ್ನು ನನ್ನ ಮುಂದೆ ಹೇಳಬೇಡಿ. ಅವರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ, ಈಗಾಗಲೇ ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಈ ಕೆಲಸಕ್ಕೆ ಕೈಹಾಕಲ್ಲ. ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

