ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯರ ಹಿರಿಮಗನನ್ನು ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 3:46 PM

ಹಿಂದೆಯೂ ಕುಮಾರಸ್ವಾಮಿ ಪ್ರಕರಣವೊಂದರಲ್ಲಿ ರಾಕೇಶ್ ಸಿದ್ದರಾಮಯ್ಯ ಹೆಸರನ್ನು ಪ್ರಸ್ತಾಪಿಸಿ ತೀವ್ರ ಸ್ವರೂಪದ ಟೀಕೆ ಎದುರಿಸಿದ್ದರು. ಸಿದ್ದರಾಮಯ್ಯ ಕುಟುಂಬ ಸರ್ಕಾರಿ ಜಮೀನನ್ನು ಲಪಟಾಯಿಸಿ ಅದನ್ನು ಮುಡಾ ಸ್ವಾಧೀನಪಡಿಸಿಕೊಂಡ ನಂತರ ಬದಲೀ ಸೈಟುಗಳನ್ನು ಪಡೆದಿದೆ ಎಂದು ಕೇಂದ್ರ ಸಚಿವ ಹೇಳಿದರು.

ಮಂಡ್ಯ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗತಿಸಿ ಹೋಗಿರುವ ಸಿದ್ದರಾಮಯ್ಯನವರ ಹಿರಿಯ ಮಗನನ್ನು ಮತ್ತೊಮ್ಮೆ ಹಗರಣವೊಂದರಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಜಮೀನು ಮಾಲೀಕ ನಿಂಗ ಹೆಸರಿನ ವ್ಯಕ್ತಿ ಸತ್ತು 20 ವರ್ಷಗಳಾಗಿದ್ದರೂ ಆ ವಿವಾದಾತ್ಮಕ ಜಮೀನನ್ನು ದಿವಂಗತ ರಾಕೇಶ್ ಸಿದ್ದರಾಮಯ್ಯ ಹೆಸರು ಉಲ್ಲೇಖೀಸದೆ ಸಿಎಂ ಹಿರಿಮಗ ಡಿನೋಟಿಫೈ ಮಾಡಿಸಿದರೆ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.