ಬಿಜೆಪಿ ಜೊತೆ ಹೊಂದಾಣಿಕೆ ಬಳಿಕ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿಗಳನ್ನು ವಹಿಸುತ್ತಿರುವ ಹೆಚ್ ಡಿ ಕುಮಾರಸ್ವಾಮಿ
ಕೆಲ ವಾರಗಳ ಹಿಂದೆ, ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಉಗ್ರಸ್ವರೂಪದ ಹೋರಾಟ ನಡೆಯುತ್ತಿದ್ದಾಗ ನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಲು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ನಿಖಿಲ್ ನನ್ನೂ ಸಂಗಡ ಕರೆದೊಯ್ದಿದ್ದರು.
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ತಮ್ಮ ಉತ್ತರಾಧಿಕಾರಿಯಾಗಿ ಮತ್ತು ಪೂರ್ಣ ಪ್ರಮಾಣದ ರಾಜಕಾರಣಿ (full-fledged politician) ಮಾಡಲು ಪಣತೊಟ್ಟಿರುವಂತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಜತೆ ಮೈತ್ರಿ ಮಾತುಕತೆ ನಡೆದ ಬಳಿಕ ನಿಖಿಲ್ ಗೆ ಕೆಲ ಮಹತ್ವದ ಜವಾಬ್ದಾರಿಗಳನ್ನು ಕುಮಾರಸ್ವಾಮಿ ವಹಿಸಿಕೊಡುತ್ತಿದ್ದಾರೆ. ಮಾತುಕತೆಯ ಮುಂದುವರಿದ ಭಾಗವಾಗಿ ನಿಖಿಲ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ನಿನ್ನೆ ಲಖನೌನಲ್ಲಿ ಭೇಟಿಯಾಗಿದ್ದಾರೆ. ಯೋಗಿಗೆ ಅವರು ರಾಮ, ಲಕ್ಷ್ಮಣ ಮತ್ತು ಸೀತೆಯ ವಿಗ್ರಹಗಳಿರುವ ಫ್ರೇಮನ್ನು ಉಡುಗೊರೆಯಾಗಿ ನೀಡಿದ್ದಾರೆ. ನಿಮಗೆ ನೆನಪಿರಬಹುದು. ಕೆಲ ವಾರಗಳ ಹಿಂದೆ, ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಉಗ್ರಸ್ವರೂಪದ ಹೋರಾಟ ನಡೆಯುತ್ತಿದ್ದಾಗ ನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಲು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ನಿಖಿಲ್ ನನ್ನೂ ಸಂಗಡ ಕರೆದೊಯ್ದಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ