ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಬಳಿಯಿರುವ ಪೆನ್‌ಡ್ರೈವ್ ಕುರಿತು ಮಹತ್ವದ ಮಾಹಿತಿ ಬಹಿರಂಗಪಡಿಸಿದ್ದಾರೆ. ಹಾಲಿ ಮುಖ್ಯಮಂತ್ರಿಗಳು ನೀರಾವರಿ ಸಚಿವರಾಗಿದ್ದಾಗ ಇಂಜಿನಿಯರ್‌ಗಳ ವರ್ಗಾವಣೆ ಕುರಿತು ನಡೆದಿದೆ ಎನ್ನಲಾದ ಭ್ರಷ್ಟಾಚಾರದ ದಾಖಲೆಗಳು ಪೆನ್‌ಡ್ರೈವ್‌ನಲ್ಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.
ಹಾಸನ, ಅಕ್ಟೋಬರ್ 10: ‘ಸಿಎಂಗೆ ಸ್ಟಿಂಗ್ ಆಪರೇಷನ್ ಚಿಂತೆ. ಐದು ಜನ ಅಂತಾ ಗೊತ್ತಿದೆ ಅಂದ ಮೇಲೆ ಅರೆಸ್ಟ್ ಮಾಡಬೇಕಲ್ವೇ?’ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಕಾಣದೆ ಇರೋ ಪೆನ್‌ಡ್ರೈವಾ, ನನ್ನ ಸ್ಟೈಲ್ ಮಾಡಲು ಆಗಲ್ಲ ಬಿಡಿ. ಅದೇನೋ ಕೇಂದ್ರ ಮಂತ್ರಿ ಅದು ಇದು ಅಂದಿದ್ದಾರೆ’ ಎಂದು ಮಂಡ್ಯ ಶಾಸಕ ಗಣಿಗ ರವಿ ವಿರುದ್ಧ ಕಿಡಿಕಾರಿದರು. ಇನ್ನು ತಮ್ಮ ಬಳಿಯಿರುವ ಪೆನ್‌ಡ್ರೈವ್ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ರಚನೆಯಾದ ಆರಂಭದಲ್ಲಿ ನೀರಾವರಿ ಇಲಾಖೆಯ ಎಂಜಿನಿಯರ್ಗಳ ವರ್ಗಾವಣೆಗಾಗಿ ಹಣ ವಸೂಲಿ ಮಾಡಿರುವ ಬಗ್ಗೆ ಹಾಗೂ ನಿವೃತ್ತಿಗೆ ಕೆಲವೇ ತಿಂಗಳುಗಳಿರುವ ಅಧಿಕಾರಿಯೊಬ್ಬರು ಸಾಲ ಮಾಡಿ ಹಣ ನೀಡಲು ನಿರಾಕರಿಸಿದ ಕುರಿತು ಚರ್ಚೆ ನಡೆದಿತ್ತು’ ಎಂದು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

