ತೋಟದ ಮನೆ ಸುತ್ತ ಸರ್ಕಾರಿ ಭೂಮಿ ಒತ್ತುವರಿ ತೆರವು: ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಹೀಗಿದೆ

Edited By:

Updated on: Mar 18, 2025 | 2:55 PM

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಒಡೆತನದ ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆ ಸುತ್ತ ಇಂದು ಜೆಸಿಬಿ ಸದ್ದು ಕೇಳಿ ಬಂದಿದೆ. ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮಾರ್ಚ್​ 18): ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ರಾಮನಗರದ ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪವಾಗಿದ್ದು, ಈ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ ಸಹ ಖಡಕ್ ಸೂಚನೆ ಸಹ ನೀಡಿದೆ. ಹೈಕೋರ್ಟ್ ಆದೇಶದಂತೆ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ಕಾರ್ಯಾಚರಣೆ ನಡೆಸಿದೆ. ರಾಮನಗರ ಜಿಲ್ಲಾಧಿಕಾರಿ, ಪೊಲೀಸ್​ ವರಿಷ್ಠಾಧಿಕಾರಿ ಸಹ ಒತ್ತುವರಿ ತೆರವು ಕಾರ್ಯ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ಸರ್ಕಾರದಿಂದ ಈ ರೀತಿಯ ದಬ್ಬಾಳಿಕೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಯಾವ ರೀತಿ ಲೂಟಿ ಹೊಡೆದಿದ್ದಾರೆ ಗೊತ್ತಿದೆ. ತಪ್ಪು ಮಾಹಿತಿಗಳಿಗೆ ಕಾನೂನು ವ್ಯಾಪ್ತಿಯಲ್ಲಿ ಉತ್ತರ ಕೊಡುತ್ತೇನೆ. ನನಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರಾಜ್ಯ ಸರ್ಕಾರ ಎಸ್ಐಟಿ ಮಾಡಿಕೊಂಡು ಈ ರೀತಿ ಮಾಡುತ್ತಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್​ಗೆ ನಾನೇ ಟಾರ್ಗೆಟ್. ನಾನು ಇಲ್ಲಿ ಇಲ್ಲ ಅಂದರೆ ಕಾಂಗ್ರೆಸ್ಸಿಗರು ಆರಾಮಾಗಿ ಇರುತ್ತಾರೆ. 40 ವರ್ಷಗಳ ಹಿಂದೆ ತೆಗೆದುಕೊಂಡ ಜಮೀನಿಗೆ 100 ಬಾರಿ ತನಿಖೆ ಆಗಿದೆ. ನನ್ನ ಮೇಲೆ ಈ ರೀತಿ ಆಗುತ್ತಿದ್ದರೆ ಜನಸಾಮಾನ್ಯರ ಪರಿಸ್ಥಿತಿ ಹೇಗೆ? ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

Loading...
Unable to load recommendations.
Follow Us
TV9 Web

TV9 Kannada

Read More