ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್
ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us