ನಾವು ಹಾಕಿಸಿದ್ದ ರಸ್ತೆಗಳ ಗುಂಡಿ ಮುಚ್ಚಿಸುವ ಯೋಗ್ಯತೆಯೂ ಈ ಸರ್ಕಾರದ ಪ್ರತಿನಿಧಿಗಳಿಗಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ಹೊಸ ರಸ್ತೆಗಳನ್ನು ನಿರ್ಮಿಸುವ ಮಾತು ಹಾಗಿರಲಿ, ತಾವು ಹಾಕಿಸಿದ ರಸ್ತೆಗಳ ಗುಂಡಿ ಮುಚ್ಚಿಸುವುದು ಕೂಡ ಸಾಧ್ಯವಾಗಿಲ್ಲ ಎಂದು ಹೇಳಿದರು. ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ಸರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು. ಪರೋಕ್ಷವಾಗಿ ಅವರು ಸಂಸದ ಡಿಕೆ ಸುರೇಶ್ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದು ಸ್ಪಷ್ಟವಾಗಿತ್ತು.
ರಾಮನಗರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಜಿಲ್ಲೆಯ ದುರವಸ್ಥೆಗಳ ಬಗ್ಗೆ ಕೆಂಡ ಕಾರಿ ಇಲ್ಲಿಯ ಜನ ಪ್ರತಿನಿಧಿಗಳು (representatives of people) ಜನ ಸಂಪರ್ಕ ಸಭೆಗಳನ್ನು ನಡೆಸೋದು ಯಾವ ಪುರುಷಾರ್ಥಕ್ಕೆ ಅಂತ ಕೇಳಿದರು. ಮೊನ್ನೆ ಬಿಡದಿಯಲ್ಲಿ (Bidadi) ಜನ ಸಂಪರ್ಕ ಸಭೆ ನಡೆಸಿದಾಗ ಜನರು ಹೇಳಿಕೊಂಡ ದೂರು ದುಮ್ಮಾನಗಳಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ, ರೊಚ್ಚಿಗೆದ್ದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಎಲ್ಲರಿಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು. ತಾನು ರವಿವಾರದಂದು ಮದುವೆಯೊಂದರಲ್ಲಿ ಪಾಲ್ಗೊಳ್ಳಲು ರಾಮನಗರದ ಸಾತನೂರು ಸರ್ಕಲ್ ಕಡೆ ಹೋದಾಗ ರಸ್ತೆ ತುಂಬಾ ಗುಂಡಿಗಳನ್ನು ಕಂಡಿದ್ದಾಗಿ ಹೇಳಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ಹೊಸ ರಸ್ತೆಗಳನ್ನು ನಿರ್ಮಿಸುವ ಮಾತು ಹಾಗಿರಲಿ, ತಾವು ಹಾಕಿಸಿದ ರಸ್ತೆಗಳ ಗುಂಡಿ ಮುಚ್ಚಿಸುವುದು ಕೂಡ ಸಾಧ್ಯವಾಗಿಲ್ಲ ಎಂದು ಹೇಳಿದರು. ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ಸರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು. ಪರೋಕ್ಷವಾಗಿ ಅವರು ಸಂಸದ ಡಿಕೆ ಸುರೇಶ್ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದು ಸ್ಪಷ್ಟವಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:42 pm, Mon, 6 November 23