ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವ

ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 25, 2023 | 6:45 PM

ಹಣವನ್ನು ಕೊಳ್ಳೆ ಹೊಡೆಯಲು ಸಿದ್ದರಾಮಯ್ಯ ಸರ್ಕಾರ ಮನೆಹಾಳು ಯೋಜನೆಗಳನ್ನು ಜಾರಿಗೆ ತರಲು ಹೇಸದು ಎಂದು ಅವರು ಹೇಳಿದ್ದರು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೋಲಾರ ಉಸ್ತುವಾರಿ ಸಚಿವ ಭೈರತಿ ಸುರೇಶ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.

ಕೋಲಾರ: ಮೂರು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಮದ್ಯದಂಗಡಿ ತೆರೆಯುವ ಸಿದ್ದರಾಮಯ್ಯ ಸರ್ಕಾರದ (Siddaramaiah government) ಯೋಜನೆಯನ್ನು ನಿನ್ನೆ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಉಗ್ರವಾಗಿ ಟೀಕಿಸಿದ್ದರು. ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡ್ತೀವಿ ಅಂದವರು ಈಗ ರಾಜ್ಯವನ್ನು ಕುಡುಕರ ತೋಟ ಮಾಡುವ ಪಣತೊಟ್ಟಂತಿದೆ ಎಂದು ಕುಮಾರಸ್ವಾಮಿ ಸರ್ಕಾರದ ಯೋಜನೆಯನ್ನು ಲೇವಡಿ ಮಾಡಿದ್ದರು. ಹಣವನ್ನು ಕೊಳ್ಳೆ ಹೊಡೆಯಲು ಸಿದ್ದರಾಮಯ್ಯ ಸರ್ಕಾರ ಮನೆಹಾಳು ಯೋಜನೆಗಳನ್ನು ಜಾರಿಗೆ ತರಲು ಹೇಸದು ಎಂದು ಅವರು ಹೇಳಿದ್ದರು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೋಲಾರ ಉಸ್ತುವಾರಿ ಸಚಿವ ಭೈರತಿ ಸುರೇಶ್ (Byrathi Suresh) ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು. ಕೋಲಾರ ಪ್ರವಾಸದಲ್ಲಿದ್ದ ಸುರೇಶ್ ಮಾಧ್ಯಮ ಪ್ರತಿನಿಧಿಗಳು ಕೇಳಿದ್ದಕ್ಕೆ, ಅಯ್ಯೋ ಬಿಡಿ ಸ್ವಾಮಿ, ಕುಮಾರಸ್ವಾಮಿ ದೇವತಾ ಪುರುಷರು ನಾವೆಲ್ಲ ಪಾಪಿಗಳು ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ