AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು

ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 13, 2024 | 5:54 PM

Share

ತಮ್ಮ ವಿರುದ್ಧ ಎಡಿಜಿಪಿ ಚಂದ್ರಶೇಖರ್​ ದೂರು ನೀಡಿದ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ದೂರು ಕೊಟ್ಟಿದ್ದಾರೆ. ದೂರು ಕೊಡುವಂತೆ ಮಾಡಿದ್ದು ಯಾರು ಅಂತ ಎಲ್ಲಾ ಗೊತ್ತಿರುವ ವಿಷಯ. ನ್ಯಾಯಾಲದಲ್ಲಿ ಹೋರಾಡೋಣ ಎಂದು ಹೇಳಿದ್ದಾರೆ.  

ದಾವಣಗೆರೆ, ಅಕ್ಟೋಬರ್​ 13: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ (ADGP Chandrashekar) ಮಧ್ಯೆ ಜಟಾಪಟಿ ಮುಂದುವರೆದಿದೆ. ಈಗಾಗಲೇ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್​ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಅದರ ಬಗ್ಗೆ ಚರ್ಚೆ ಬೇಡ. ಪ್ರಕರಣ ನ್ಯಾಯಾಲದಲ್ಲಿ ಇದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊತ್ತಾಗುತ್ತದೆ. ನ್ಯಾಯಾಲದಲ್ಲಿ ಹೋರಾಡೋಣ. ದೂರು ಕೊಟ್ಟಿದ್ದಾರೆ. ದೂರು ಕೊಡುವಂತೆ ಮಾಡಿದ್ದು ಯಾರು ಅಂತ ಎಲ್ಲಾ ಗೊತ್ತಿರುವ ವಿಷಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More