ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್ ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 02, 2023 | 2:25 PM

ಚಿಕ್ಕಬಳ್ಳಾಪುರದಿಂದ ಕೋನರೆಡ್ಡಿ ಅವರಿಗೆ ಟಿಕೆಟ್ ನೀಡಲಾಗುವುದು ಅಂತ ಈಗಾಗಾಲೇ ಘೋಷಿಸಲಾಗಿದೆ, ಆದಗ್ಯೂ ಸುಧಾಕರ್ ಇಂಥ ಸುಳ್ಳುಗಳನ್ನು ಹರಡಿ ಜನರಲ್ಲಿ ಗೊಂದಲ ಮೂಡಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ ಬಳಿಕ ಮಾಧ್ಮದವರೊಂದಿಗೆ ಮಾತಾಡಿದ ಜೆಡಿಎಸ್ ಧುರೀಣ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ತಾವು ಬೇರೊಂದು ಕಡೆ ಪ್ರವಾಸದಲ್ಲಿದ್ದಾಗ ಸುಧಾಕರ್ ಅವರಿ ಚಿಕ್ಕಬಳ್ಳಾಪುರದಿಂದ ಅನಿತಾ ಕುಮಾರಸ್ವಾಮಿ (Anita Kumaraswamy) ಸ್ಪರ್ಧಿಸುತ್ತಾರೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಾರೆ, ಹಾಗೆಲ್ಲ ಮಾತಾಡಲು ಅವರಿಗೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ಹೇಳಿದರು. ಚಿಕ್ಕಬಳ್ಳಾಪುರದಿಂದ ಕೋನರೆಡ್ಡಿ ಅವರಿಗೆ ಟಿಕೆಟ್ ನೀಡಲಾಗುವುದು ಅಂತ ಈಗಾಗಾಲೇ ಘೋಷಿಸಲಾಗಿದೆ, ಆದಗ್ಯೂ ಸುಧಾಕರ್ ಇಂಥ ಸುಳ್ಳುಗಳನ್ನು ಹರಡಿ ಜನರಲ್ಲಿ ಗೊಂದಲ ಮೂಡಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಇದೇ ಸಂದರ್ಭದಲ್ಲಿ ಅವರು ಕೃಷ್ಣಾ ಭೈರೇಗೌಡ ಅವರನ್ನು ಸಹ ಟೀಕಿಸಿದರು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ