ಮಾದವಾರ ಟೋಲ್‌ನಲ್ಲಿ ನೈಸ್ ಸಂತ್ರಸ್ತ ರೈತರ ಅಹವಾಲು ಸ್ವೀಕರಿಸಿದ ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೈಸ್ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಾದವಾರ ಟೋಲ್‌ನಲ್ಲಿ ಸಂತ್ರಸ್ತ ರೈತರೊಂದಿಗೆ ಶುಕ್ರವಾರ ಸಂವಾದ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದ್ದಾರೆ. ಭೂಮಿ ಕಳೆದುಕೊಂಡ ರೈತರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರಿಗೆ ನ್ಯಾಯ ದೊರಕಿಸಿಕೊಡಲು ಬದ್ಧರಾಗಿರುವುದಾಗಿ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 2: ನೈಸ್ (NICE) ಅಕ್ರಮದ ಆರೋಪ ಸಂಬಂಧ ಹೋರಾಟವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರಗೊಳಿಸಿದ್ದಾರೆ. ನೈಸ್ ರಸ್ತೆಯ ಮಾದವಾರ ಟೋಲ್‌ನಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಅವರು ಶುಕ್ರವಾರ ಸಂವಾದ ನಡೆಸಿದರು. ಇಂದು ಇಡೀ ದಿನ ರೈತರೊಂದಿಗೆ ಕಾಲ ಕಳೆದು, ಅವರ ಅಹವಾಲುಗಳನ್ನು ಆಲಿಸಲು ಕುಮಾರಸ್ವಾಮಿಯವರು ನಿರ್ಧರಿಸಿದ್ದಾರೆ. ನೈಸ್ ರಸ್ತೆಗೆ ಹೊಂದಿಕೊಂಡಿರುವ ಹಲವು ಹಳ್ಳಿಗಳಿಗೂ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳಲಿದ್ದಾರೆ. ಈ ಸಂವಾದದ ನಂತರ ಕುಮಾರಸ್ವಾಮಿಯವರು ಸುದ್ದಿಗೋಷ್ಠಿಯನ್ನು ನಡೆಸಿ, ರೈತರು ಹಂಚಿಕೊಂಡ ಸಮಸ್ಯೆಗಳ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.
ಮೊನ್ನೆ ಮೊನ್ನೆಯಷ್ಟೇ ‘‘ನಥಿಂಗ್ ನೈಸ್’’ ಎಂಬ ವಿಡಿಯೋ ಪ್ರಸೆಂಟೇಷನ್ ಮೂಲಕ ನೈಸ್ ವಿಚಾರಕ್ಕೆ ಸಂಬಂಧಿಸಿದ ಹಲವು ಸಂಗತಿಗಳನ್ನು ಅವರು ಬಹಿರಂಗಪಡಿಸಿ, ಹಲವು ಆರೋಪಗಳನ್ನು ಮಾಡಿದ್ದರು. ಅದರ ಮುಂದುವರಿದ ಭಾಗವಾಗಿ, ಈಗ ರೈತರ ಜೊತೆಗೆ ನೇರ ಸಂವಾದ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

