ಅಡ್ಡಮತದಾನದ ಹಿಂದೆ ಅಡಗಿದೆ ಕೋಟಿ ಕೋಟಿ ಅನುದಾನದ ಆಮಿಷ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

Edited By:

Updated on: Jun 20, 2026 | 2:42 PM

MLC ಚುನಾವಣೆಯ ಅಡ್ಡಮತದಾನ ಕುರಿತು ಹೆಚ್​.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ಷೇತ್ರದ ಅನುದಾನ ಆಮಿಷ ಹಾಗೂ ಶಾಸಕರ ಅಸಮಾಧಾನದಿಂದ ಈ ಘಟನೆ ನಡೆದಿದೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿಯ ವಿಶ್ವಾಸವನ್ನು ಭಂಗಗೊಳಿಸುವುದಿಲ್ಲ ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಜೂ.20: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ ಕಾರ್ಯಕರ್ತರ ಅಸಮಾಧಾನ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಇದೇ ಹಿನ್ನೆಲೆಯಲ್ಲಿ, ಈಗಿನ ಸರ್ಕಾರವು ಮತದಾರರಿಗೆ “ನಮ್ಮ ಪಕ್ಷಕ್ಕೆ ಮತ ಹಾಕಿದರೆ 50 ಕೋಟಿ, 100 ಕೋಟಿ ಅನುದಾನ ಕೊಡುತ್ತೇವೆ” ಎಂದು ಆಮಿಷ ಒಡ್ಡಿರುವುದು ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೆಲ ಶಾಸಕರು ಅನುದಾನದ ಆಮಿಷಕ್ಕೆ ಒಳಗಾಗಿ ಚಂಚಲ ಮನಸ್ಸು ಮಾಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಅಡ್ಡಮತದಾನದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಯಾವುದೇ ವಿಶ್ವಾಸ ಕೊರತೆ ಉಂಟಾಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಇದು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು 2017ರ ರಾಜ್ಯಸಭಾ ಚುನಾವಣೆಯ ಉದಾಹರಣೆ ನೀಡಿ ವಿವರಿಸಿದರು. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಸೃಷ್ಟಿಸಲು ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ. ಅಡ್ಡಮತದಾನದ ಬಗ್ಗೆ ಬಿಜೆಪಿ ಹೈಕಮಾಂಡ್​​ಗೆ ಮಾಹಿತಿ ನೀಡಲು ದೆಹಲಿಗೆ ತೆರಳುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More