AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಜೈಲಿಗೆ ಹೋಗಲು ಸಿದ್ಧರಾಗಿ': ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್!

‘ಜೈಲಿಗೆ ಹೋಗಲು ಸಿದ್ಧರಾಗಿ’: ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್!

ಪ್ರಸನ್ನ ಗಾಂವ್ಕರ್​
| Edited By: |

Updated on: Jun 24, 2026 | 10:45 AM

Share

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, "ಜೈಲಿಗೆ ಹೋಗಲು ಸಿದ್ಧರಾಗಿ" ಎಂಬ ಸಂದೇಶವನ್ನು ಪ್ರಮುಖವಾಗಿ ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೆಚ್.ಡಿ. ಕುಮಾರಸ್ವಾಮಿ ಎಂದು ಎಲ್ಲರಿಗೂ ಗೊತ್ತು ಎಂದೂ ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಪೋಸ್ಟರ್‌ಗಳಲ್ಲಿ ಹಾಸ್ಯ ಮಿಶ್ರಿತ ಸಂಭಾಷಣೆಯನ್ನೂ ಚಿತ್ರಿಸಲಾಗಿದೆ. ಈ ಪೋಸ್ಟರ್ ವಾರ್ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಬೆಂಗಳೂರು, ಜೂನ್ 24: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, “ಜೈಲಿಗೆ ಹೋಗಲು ಸಿದ್ಧರಾಗಿ” ಎಂಬ ಸಂದೇಶವನ್ನು ಪ್ರಮುಖವಾಗಿ ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೆಚ್.ಡಿ. ಕುಮಾರಸ್ವಾಮಿ ಎಂದು ಎಲ್ಲರಿಗೂ ಗೊತ್ತು ಎಂದೂ ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಪೋಸ್ಟರ್‌ಗಳಲ್ಲಿ ಹಾಸ್ಯ ಮಿಶ್ರಿತ ಸಂಭಾಷಣೆಯನ್ನೂ ಚಿತ್ರಿಸಲಾಗಿದೆ. ಈ ಪೋಸ್ಟರ್ ವಾರ್ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More