ಮೋದಿ ಸರ್ಕಾರದಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವರಾಗುವವರು ಇವರೇ ನೋಡಿ

|

Updated on: Jun 09, 2024 | 5:04 PM

ಮೂಲಗಳ ಪ್ರಕಾರ ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಸೋಮಣ್ಣ ಬಿಟ್ಟು ಇನ್ನುಳಿಉದ ನಾಲ್ವರು ಯಾರ್ಯಾರು ಎನ್ನುವುದನ್ನು ನೋಡಿ.

ನವದೆಹಲಿ, (ಜೂ.09): ಲೋಕಸಭಾ ಚುನಾವಣೆಯ ಬೆನ್ನಲ್ಲಿಯೇ ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕಾರ ಮಾಡಲಿದ್ದಾರೆ. ರಾಜ್ಯದ ಐವರಿಗೆ ಸಂಸದರಿಗೆ ಸಚಿವ ಸ್ಥಾನ ಸಿಗಲಿದೆ. ಅದರಲ್ಲಿ ನಿರ್ಮಲಾ ಸೀತಾರಾಮನ್, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ಅವರು ಕ್ಯಾಬಿನೆಟ್ ದರ್ಜೆಯ ಸಚಿವರಾಗಲಿದ್ದಾರೆ. ಉಳಿದಂತೆ ಶೋಭಾ ಕರಂದ್ಲಾಜೆ ಹಾಗೂ ವಿ. ಸೋಮಣ್ಣ ಅವರನ್ನು ರಾಜ್ಯ ಖಾತೆ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿದುಬಂದಿದೆ. ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 17 ಹಾಗೂ ಜೆಡಿಎಸ್ 2 ಸೇರಿ ಒಟ್ಟು 19 ಮಂದಿ ಗೆದ್ದು ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡಿದ್ದಾರೆ. ಅದರಲ್ಲಿ ಮಂತ್ರಿಗಿರಿ ಹಂಚಿಕೆಯಲ್ಲಿ ಮೊದಲ ಬಾರಿಗೆ ಸಂಸತ್ತಿಗೆ ಹೋದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಮಂತ್ರಗಿರಿ ಸ್ಥಾನ ನೀಡಲಾಗುತ್ತಿದೆ. ಉಳಿದಂತೆ ಕಳೆದೆರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಗುತ್ತಿದೆ.

PM Modi Swearing-in Ceremony Live: ನರೇಂದ್ರ ಮೋದಿಗೆ 3ನೇ ಬಾರಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ

Published on: Jun 09, 2024 04:24 PM