ಮುಂದಿನ ಆರೇಳು ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು: ಭವಿಷ್ಯ ನುಡಿದ ಹೆಚ್ಡಿ ಕುಮಾರಸ್ವಾಮಿ
ಮುಂದಿನ ಆರು ಏಳು ತಿಂಗಳಲ್ಲಿ ಕರ್ನಾಟಕದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜನತೆ ಈಗಾಗಲೇ ಬೇಸತ್ತಿದ್ದು, ಸರ್ಕಾರವನ್ನು ಕಿತ್ತೊಗೆಯಲು ಕಾಯುತ್ತಿದ್ದಾರೆ ಎಂದರು.
ಬೆಂಗಳೂರು, ನವೆಂಬರ್ 22: ಜೆಡಿಎಸ್ ಪಕ್ಷಕ್ಕೆ 25 ವರ್ಷ ಹಿನ್ನೆಲೆ ರಜತ ಮಹೋತ್ಸವ ಸಂಭ್ರಮದಲ್ಲಿದೆ. ನಗರದ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, 2028ರವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ನವರು ಸಂತಸವಾಗಿರಲಿ. ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಲು ಜನರು ಕಾಯುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಮುಂದಿನ 6-7 ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
