Kumaraswamy Press Conference Live: ಎಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್: ಮಹತ್ವದ ಘೋಷಣೆ
Kumaraswamy Press Conference Live: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಇನ್ನು ಮುಖ್ಯವಾಗಿ ಈ ಸುದ್ದಿಗೋಷ್ಠಿಯಲ್ಲಿ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಾರೋ ಇಲ್ಲವೋ ಎನ್ನುವುದನ್ನು ಸಹ ಘೋಷಣೆ ಮಾಡಲಿದ್ದಾರೆ. ಹೀಗಾಗಿ ಎಚ್‌ಡಿಕೆ ಅವರ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದ್ದು, ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವುದನ್ನು ಲೈವ್ನಲ್ಲಿ ನೋಡಿ.
ಬೆಂಗಳೂರು, (ಮಾರ್ಚ್ 26): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ (BJP JDS Alliance) ಇನ್ನೂ ನಿಗದಿಯಾದ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ (Mandya Lok Sabha constituency) ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಉಳಿದಿದೆ. ಇಲ್ಲಿ ಈ ಮೊದಲು ಸಿ.ಎಸ್. ಪುಟ್ಟರಾಜು (CS Puttaraju) ಕಣಕ್ಕಿಳಿಯುತ್ತಾರೆ ಎಂದೇ ಇತ್ತು. ಆದರೆ, ಬದಲಾದ ಸನ್ನಿವೇಶದಲ್ಲಿ ಅಲ್ಲಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಣಕ್ಕಿಳಿದರೆ ಮಾತ್ರ ಗೆಲುವು ಸುಲಭ ಎನ್ನುವ ವಾತಾವರಣ ಇದೆ. ಅಲ್ಲದೆ, ಕಾರ್ಯಕರ್ತರು ಸಹ ಎಚ್‌ಡಿಕೆ ಇಲ್ಲವೇ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿ ಎಂದು ಒತ್ತಾಯ ಮಾಡಿದ್ದಾರೆ. ಮತ್ತೊಂದೆಡೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಹೋಗದಂತೆ ಅಲ್ಲಿನ ಮುಖಂಡರು ಸಹ ಆಗ್ರಹಿಸುತ್ತಿದ್ದಾರೆ. ಇದರಿಮದ ಕುಮಾರಸ್ವಾಮಿ ಇಕ್ಕಟ್ಟಿಗೆ ಸಿಲುಕಿದ್ದು, ಇದೀಗ ಇಂದಿನ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ತಮ್ಮ ಅಂತಿಮ ನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯದ ಜೊತೆಗೆ ಕೋಲಾರ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಸಾಧ್ಯತೆಗಳಿದ್ದು, ಕುಮಾರಸ್ವಾಮಿ ಅವರ ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ.