HD Kumaraswamy Press Meet: ಲೋಕಸಭಾ ಫಲಿತಾಂಶ, ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿ ನೋಡಿ

HD Kumaraswamy Press Meet: ಲೋಕಸಭಾ ಫಲಿತಾಂಶ, ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿ ನೋಡಿ

Ganapathi Sharma
|

Updated on:Jun 04, 2024 | 1:07 PM

ಹೆಚ್​​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್: ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಎನ್​ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಿರುವ ಬೆನ್ನಲ್ಲೇ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಅದರ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ (Mandya) ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ (ಅಧಿಕೃತ ಘೋಷಣೆ ಬಾಕಿ ಇದೆ) ಜೆಡಿಎಸ್  (JDS) ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ದಿಢೀರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಎನ್​ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಿರುವ ಬೆನ್ನಲ್ಲೇ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಅದರ ನೇರ ಪ್ರಸಾರ ಇಲ್ಲಿದೆ.

ಸದ್ಯ ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದು, ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ದಿದ್ದಾರೆ. ಮತ್ತೊಂದೆಡೆ, ಹಾಸನ ಕ್ಷೇತ್ರದ ಫಲಿತಾಂಶ ಇನ್ನಷ್ಟೇ ಘೋಷಣೆಯಾಗಬೇಕಿದೆ. ರಾಜ್ಯದಲ್ಲಿ ಎನ್​ಡಿಎ ಮೈತ್ರಿ 19 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ

ಮೈತ್ರಿ ಅಭ್ಯರ್ಥಿಗಳನ್ನು ಆಶೀರ್ವದಿಸಿದ ಜನತೆಗೆ ಧನ್ಯವಾದಗಳು. ಎನ್​​ಡಿಎ ಸರ್ಕಾರದ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಆ ಅಪಪ್ರಚಾರಗಳ ನಡುವೆಯೂ ಎನ್​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಮೋದಿ ನೇತೃತ್ವದ ಸರ್ಕಾರ ರಚನೆಗೆ ಬಹುಮತ ದೊರೆಯಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ಮೋದಿ ಅವರು ಎರಡೂವರೆ ತಿಂಗಳು ಅತ್ಯಂತ ಶ್ರಮ ವಹಿಸಿ ಬಿಜೆಪಿ, ಎನ್​ಡಿಎ ಮೈತ್ರಿಕೂಟದ ಗೆಲುವಿಗೆ ಕಾರಣರಾದರು. ಅವರಿಗೆ ಕೃತಜ್ಞತೆ ಸಲ್ಲಿಸಬೇಕು. ಎಕ್ಸಿಟ್ ಪೋಲ್ ನೀಡಿದ್ದ ಸರ್ವೆಯಲ್ಲಿ ಏರಿಳಿತವಿತ್ತು. ಕಾಂಗ್ರೆಸ್ ಹಾಗೂ ಇತರ ಕೆಲವು ಪಕ್ಷಗಳ ಅಪಪ್ರಚಾರ ದೊಡ್ಡ ಮಟ್ಟದಲ್ಲಿ ನಡೆದಿತ್ತು. ಈ ಏರುಪೇರಿಗೆ ಕಾಣದ ಕೈಗಳ ಕೈವಾಡದ ಕುತಂತ್ರಗಳು ನಡೆದಿವೆ. ಅಪಪ್ರಚಾರ ನಡುವೆಯು ಮೋದಿ ಅವರ ನಾಯಕತ್ವದಲ್ಲಿ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತಿದೆ. ಅದಕ್ಕೆ ದೇಶದ ಮತದಾರನನ್ನ ನಾನು ಅಭಿನಂದಿಸುತ್ತೇನೆ. ಮುಖ್ಯಮಂತ್ರಿಗಳಿಗೆ ಮುಂದಿನ ದಿನಗಳು ಸವಾಲಿನಿಂದ ಕೂಡಿರುತ್ತೆ ಅನ್ನೋದು ನನ್ನ ಅಭಿಪ್ರಾಯ. ಈಗ ಒಂದೊಂದೆ ಹೆಜ್ಜೆ ಇಡಬೇಕಾದರು ಜಾಗರೂಕತೆಯಿಂದ ಇಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ ಅಂತ ಇದ್ದರು. ನಾವು ಬಿಜೆಪಿ ಜೊತೆ ಒಂದಾಣಿಕೆ ಮಾಡಿಕೊಂಡಾಗ ಜೆಡಿಎಸ್ ಬಗ್ಗೆ ಅವರು ಬಳಸಿದ ಪದಗಳನ್ನು ನಾನು ಮರೆಯೋದಕ್ಕೆ ಸಾಧ್ಯವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನ ಹೊಂದಾಣಿಕೆಯನ್ನು ಜನ ಬೆಂಬಲಿಸಿರುವುದಕ್ಕೆ ಈ ಭಾಗದಲ್ಲಿ ಬಂದುರುವ ಫಲಿತಾಂಶವೇ ಉದಾಹರಣೆ ಎಂದು ಕುಮಾರಸ್ವಾಮಿ ಹೇಳಿದರು.

ಅದೆಲ್ಲದಕ್ಕಿಂದ ಬೆಂಗಳೂರು ಗ್ರಾಮೀಣದಲ್ಲಿ ನಾವು ಗೆಲ್ಲುತ್ತೇವೆ ಎಂಬ ದುರಂಕಾರದ ಮಾತುಗಳು ಇತ್ತಲ್ಲ, ಅವರ ಉದ್ಧಟತದನದ ಮಾತುಗಳಿಗೆ ಜನ ಉತ್ತರ ಕೊಟ್ಟಿದ್ದಾರೆ. ಚುನಾವಣೆ ಗೆಲುವಿನಿಂದ ಯಾವುದೇ ಕಾರಣಕ್ಕೂ ನಮ್ಮ ನಡುವಳಿಕೆಯಲ್ಲಿ ದುರಂಕಾರವನ್ನು ನಾವು ತೋರಬಾರದು ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 04, 2024 12:53 PM