HD Kumaraswamy Press Meet Live: ಕುಮಾರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹೆಚ್.ನಿಂಗಪ್ಪ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಇಂದು (ಏ.02) ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಮೈಸೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಇದೀಗ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹೆಚ್.ನಿಂಗಪ್ಪ, ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಅವರು ಇತ್ತೀಚಿಗೆ ನಿಂಗಪ್ಪ ಅವರ ಮನೆಗೆ ಭೇಟಿ ನೀಡಿ, ಪಕ್ಷಕ್ಕೆ ಮರಳುವಂತೆ ಮನವೊಲಿಕೆ ಮಾಡಿದ್ದರು. ಅದರಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ, ಇಂದು (ಏ.02) ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ನಿಂಗಪ್ಪ ಜೆಡಿಎಸ್ನಿಂದ ಸ್ಪರ್ಧಿಸಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಡಿಸಿ ಗೌರಿಶಂಕರ್ ಅವರು ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದ ಬಳಿಕ ನಿಂಗಪ್ಪ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ