AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ

ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ

ಅಕ್ಷತಾ ವರ್ಕಾಡಿ
|

Updated on: Nov 14, 2026 | 4:29 PM

Share

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಸದಸ್ಯರಾದ ದೇವೇಗೌಡ, ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎಲ್ಲರ ಕ್ಷೇಮ, ಆರೋಗ್ಯ ಮತ್ತು ಯಶಸ್ಸಿಗಾಗಿ ಪೂಜೆಯನ್ನು ನೆರವೇರಿಸಿದರು. ಇತ್ತೀಚೆಗೆ ದೇವಸ್ಥಾನ ಪ್ರವೇಶ ವಿವಾದದ ನಡುವೆ ಈ ಧಾರ್ಮಿಕ ಕಾರ್ಯ ನೆರವೇರಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಪ್ರಸಿದ್ಧ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಸದಸ್ಯರಾದ ತಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಾಯಿ ದಿ| ಚೆನ್ನಮ್ಮ ಹಾಗೂ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ರೇವತಿ ಸೇರಿದಂತೆ ಎಲ್ಲರ ಕ್ಷೇಮ, ಆರೋಗ್ಯ, ಯಶಸ್ಸು ಹಾಗೂ ಅಡೆತಡೆಗಳ ನಿವಾರಣೆಗಾಗಿ ರಂಗನಾಥಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕುಟುಂಬದ ಸದಸ್ಯರ ಆಯುಷ್ಯ, ಆರೋಗ್ಯ, ಐಶ್ವರ್ಯ ವೃದ್ಧಿ ಮತ್ತು ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿಗಾಗಿ ದೇವರ ಮೊರೆ ಹೋಗಲಾಯಿತು.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More