HD Kumaraswamy: ಹಾಸನ ಜೆಡಿಎಸ್ ಟಿಕೆಟ್ ಯಾರಿಗೆ ಎಂಬ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ಹೆಚ್ಡಿ ಕುಮಾರಸ್ವಾಮಿ
ಕುಟುಂಬದಲ್ಲಿ ಯಾವ್ದೇ ಭಿನ್ನಾಭಿಪ್ರಾಯ ಬಂದ್ರೂ ದೇವೇಗೌಡರು ಸರಿ ಮಾಡ್ತಾರೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ಹಾಸನ ಟಿಕೆಟ್ಗಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ(HD Deve Gowda) ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಸದ್ಯ ಈ ಬಗ್ಗೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ(HD Kumaraswamy), ಇಂದೇ ಹಾಸನ ಕ್ಷೇತ್ರದ ಟಿಕೆಟ್ ಗೊಂದಲ ಬಗೆಹರಿಯಲಿದೆ ಎಂದಿದ್ದಾರೆ. ನಾನು, ಹೆಚ್ಡಿಡಿ, ಸಿ.ಎಂ.ಇಬ್ರಾಹಿಂ ಚರ್ಚಿಸಿ ತೀರ್ಮಾನ ಮಾಡ್ತೇವೆ. 2ನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ. ಪಂಚರತ್ನ ಕಾರ್ಯಕ್ರಮ ಇರುವ ಹಿನ್ನೆಲೆ ನಾನು ಸಭೆಗೆ ಹೋಗುತ್ತಿಲ್ಲ. ಕಾರ್ಯಕರ್ತನಿಗೆ ಹಾಸನ ಟಿಕೆಟ್ ನೀಡಬೇಕು ಎಂಬ ಒತ್ತಡ ಇದೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ತಿಳಿಸಿದರು.
Published on: Apr 02, 2023 03:20 PM
Loading...
Unable to load recommendations.
Follow Us