ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ

Updated on: Feb 21, 2026 | 5:45 PM

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ಕುರಿ ಕಾಯೋನು ಸಿಎಂ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಸಮಾಜದ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿ ಭೇದ ಮರೆತು ಅನೇಕ ಸಮುದಾಯಗಳು ಅವರ ಬೆಳವಣಿಗೆಗೆ ಸಹಕರಿಸಿದ್ದನ್ನು ಅವರು ಮರೆತಿದ್ದಾರೆ.

ಬೆಂಗಳೂರು, ಫೆಬ್ರವರಿ 21: ಸಿಎಂ ಆಗಿರುವುದನ್ನು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದು ಸಿದ್ದರಾಮಯ್ಯ ಅವರ ಒಳಗಿನ ದುಗುಡವನ್ನು ತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಕೇವಲ ಕುರುಬ ಸಮುದಾಯದವರು ಮಾತ್ರವಲ್ಲ, ಮೈಸೂರಿನ ರಾಜಕಾರಣದಲ್ಲಿ ಜಾತಿ ಭೇದ ಮರೆತು ಹಲವು ಸಮಾಜಗಳು ಅವರ ರಾಜಕೀಯ ಬೆಳವಣಿಗೆಗೆ ಶಕ್ತಿ ತುಂಬಿವೆ. ಈ ಸಾಮಾನ್ಯ ಜ್ಞಾನ ಅವರಿಗೆ ಇಲ್ವಾ ಎಂದು ಪ್ರಶ್ನಿಸಿದರು. ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಸಮಾಜದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ನನ್ನ ಅಭಿಪ್ರಾಯ. ತಮ್ಮ ಪಕ್ಷದಲ್ಲಿ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ, ಆದರೆ ರಾಜ್ಯದ ಜನತೆಗೆ ನಿರಾಸೆ ಮಾಡಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 21, 2026 05:39 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More