Video: ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ, ರೇವಣ್ಣ ಕುಟುಂಬದಿಂದ ವಿಶೇಷ ಪೂಜೆ
ಎರಡನೇ ಶ್ರಾವಣ ಶನಿವಾರದಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಡಾ. ಸೂರಜ್ ರೇವಣ್ಣ ಸಹ ಪೂಜೆಯಲ್ಲಿ ಭಾಗಿಯಾಗಿದ್ದರು.
ಹಾಸನ: ಎರಡನೇ ಶ್ರಾವಣ ಶನಿವಾರದ ಶುಭ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿರುವ ಐತಿಹಾಸಿಕ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಅವರ ಸಹೋದರ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದ ಮೊದಲ ಅಭಿಷೇಕ ಪೂಜೆಯಲ್ಲಿ ಕುಮಾರಸ್ವಾಮಿ ಮತ್ತು ರೇವಣ್ಣ ಭಾಗಿಯಾದರು. ದೇಶದ ಸಮೃದ್ಧಿ, ಕುಟುಂಬದ ಯೋಗಕ್ಷೇಮ ಹಾಗೂ ಫಲ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ರಂಗನಾಥ ಸ್ವಾಮಿಯ ದಿವ್ಯ ಚರಣಾರವಿಂದಗಳಿಗೆ ಪಂಚಾಮೃತ ಅಭಿಷೇಕ, ಮಧು ಸ್ನಾನ ಪೂರ್ವಕ ಆರಾಧನೆಗಳು ನಡೆದಿವು. ಈ ಸಂದರ್ಭದಲ್ಲಿ ಆರೋಗ್ಯ, ಧನ ಧಾನ್ಯ ಸಮೃದ್ಧಿ ಮತ್ತು ಪುತ್ರಪೌತ್ರಾದಿ ಅಭಿರುದ್ಧಿಗಾಗಿ ವಿಶೇಷ ಪ್ರಾರ್ಥನೆಗಳು ಸಲ್ಲಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

