ರಾಮನಗರ ಜಿಲ್ಲೆಯಾದ್ಯಂತ ಮಳೆ, ತೊಂದರೆಗೆ ಸಿಲುಕಿದ ಜನರ ನೆರವಿಗೆ ಧಾವಿಸಿದ ಹೆಚ್ ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಾದ್ಯಂತ ಮಳೆ, ತೊಂದರೆಗೆ ಸಿಲುಕಿದ ಜನರ ನೆರವಿಗೆ ಧಾವಿಸಿದ ಹೆಚ್ ಡಿ ಕುಮಾರಸ್ವಾಮಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2022 | 3:40 PM

ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟ್ ವ್ಯವಸ್ಥೆ ಮಾಡಬೇಕೆಂದು ಅವರು ಫೋನಲ್ಲಿ ಹೇಳುತ್ತಿರುವುದು ಕೇಳಿಸುತ್ತದೆ.

ರಾಮನಗರ (Ramanagara) ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಗ್ರಾಮಗಳು ಜಲಾವೃತಗೊಂಡು ಜನ ಪರದಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ರಾಮನಗರದ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ (Chief Secretary) ಫೋನ್ ಮಾಡಿ ತೊಂದರೆ ಸಿಕ್ಕಿರುವ ಜನರಿಗೆ ಕೂಡಲೇ ನೆರವು ಒದಗಿಸುವಂತೆ ಆಗ್ರಹಿಸಿದರು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟ್ ವ್ಯವಸ್ಥೆ ಮಾಡಬೇಕೆಂದು ಅವರು ಫೋನಲ್ಲಿ ಹೇಳುತ್ತಿರುವುದು ಕೇಳಿಸುತ್ತದೆ.