ಬಾಗಲಕೋಟೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಅವರ ಕುಟುಂಬದ ಮತ್ತೊಬ್ಬ ಸದಸ್ಯರು ರಾಜ್ಯ ರಾಜಕೀಯ ರಂಗ ಪ್ರವೇಶಿಸುವುದು ಹೆಚ್ಚು ಕಡಿಮೆ ಖಚಿತವಾದಂತಿದೆ. ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಅವರು ಹಾಸನ ಜಿಲ್ಲಾ ರಾಜಕಾರಣದಲ್ಲಿ ಬಹಳಷ್ಟು ಸಕ್ರಿಯರಾಗಿದ್ದಾರೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಅವರು ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಕೇಳಿದಾಗ, ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡಿದರು. ಪಕ್ಷದ ವೇದಿಕೆಯಲ್ಲಿ ಭವಾನಿ ಆವರ ಅಭ್ಯರ್ಥಿತ್ವದ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ