Assembly polls: ಭವಾನಿ ರೇವಣ್ಣ ಸ್ಪರ್ಧಿಸುವ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡಿದರು!

ಅರುಣ್​ ಕುಮಾರ್​ ಬೆಳ್ಳಿ

Updated on: Jan 24, 2023 | 3:57 PM

ಪಕ್ಷದ ವೇದಿಕೆಯಲ್ಲಿ ಭವಾನಿ ಆವರ ಅಭ್ಯರ್ಥಿತ್ವದ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಬಾಗಲಕೋಟೆ:  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಅವರ ಕುಟುಂಬದ ಮತ್ತೊಬ್ಬ ಸದಸ್ಯರು ರಾಜ್ಯ ರಾಜಕೀಯ ರಂಗ ಪ್ರವೇಶಿಸುವುದು ಹೆಚ್ಚು ಕಡಿಮೆ ಖಚಿತವಾದಂತಿದೆ. ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (Bhavani Revanna) ಅವರು ಹಾಸನ ಜಿಲ್ಲಾ ರಾಜಕಾರಣದಲ್ಲಿ ಬಹಳಷ್ಟು ಸಕ್ರಿಯರಾಗಿದ್ದಾರೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಅವರು ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಕೇಳಿದಾಗ, ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡಿದರು. ಪಕ್ಷದ ವೇದಿಕೆಯಲ್ಲಿ ಭವಾನಿ ಆವರ ಅಭ್ಯರ್ಥಿತ್ವದ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.