ಸಿದ್ದರಾಮಯ್ಯ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ಅನುಮತಿ: ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಸರಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ರಾಜೀನಾಮೆ ಕಾಂಗ್ರೆಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ, ಅಚ್ಚರಿ ಎಂಬಂತೆ ಮುಖ್ಯಮಂತ್ರಿಗಳ ರಾಜೀನಾಮೆ ನಾನು ಆಗ್ರಹಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನನ್ನಿಂದ ಏನೇ ತಪ್ಪು ಆಗಿರದಿದ್ದರೂ ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಸಂಬಂಧ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹ ವ್ಯಕ್ತಪಡಿಸಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಇಲ್ಲ ಎಂದು ಹೇಳಿದ್ದಾರೆ.
ಅಂದು ಕೂಡ ನಾನು ರಾಜೀನಾಮೆ ಕೇಳಿಲ್ಲ. ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ, ಕಾನೂನು ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ತಪ್ಪು ಮಾಡಿದರೆ ನ್ಯಾಯಾಲಯಗಳು ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 24, 2024 03:18 PM
Latest Videos