ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

Updated on: Dec 26, 2024 | 12:37 PM

ಬೆಳಗಾವಿಯಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ಶತಮಾನೋತ್ಸವ ನಡೆಯುತ್ತಿದೆ. ಆದರೆ, ಗಾಂಧೀಜಿಯವರ ಹೆಸರಿನಲ್ಲಿ ಆಧುನಿಕ ಗಾಂಧಿಗಳೇ ರಾರಾಜಿಸುತ್ತಿದ್ದಾರೆ ಎಂದು ಹೆಚ್​​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಗಾಂಧೀಜಿಯವರ ಸ್ಮರಣೆಗೆ ಹೆಸರಿನಲ್ಲಿ ಏನೋ ಮಾಡುತ್ತಿದ್ದಾರೆ ಎಂದು, ಸಮಾವೇಶದ ಹಿನ್ನೆಲೆಯಲ್ಲಿ ಹಾಕಿರುವ ಬೃಹತ್ ಕಟೌಟ್​​ಗಳನ್ನು ಉಲ್ಲೇಖಿಸಿ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಬೆಂಗಳೂರು, ಡಿಸೆಂಬರ್ 26: ಮಹಾತ್ಮ ಗಾಂಧಿ ಹೆಸರಿನಲ್ಲಿ ಮಾಡುತ್ತಿರುವ ಬೆಳಗಾವಿ ಸಮಾವೇಶದಲ್ಲಿ ಆಧುನಿಕ ಗಾಂಧಿಗಳ ಕಟೌಟ್​ಗಳೇ ರಾರಾಜಿಸುತ್ತಿವೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ವಿಷಯಗಳು ಗೊತ್ತಿಲ್ಲ. ಇವತ್ತು ಗಾಂಧೀಜಿಯವರ ಶತಮಾನೋತ್ಸವ ಶತಮಾನೋತ್ಸವದ ಕಾರ್ಯಕ್ರಮ ಅದ್ದೂರಿಯಾಗಿ ನಡೀತಾ ಇದೆ. ಬೆಳಗಾವಿಯಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ಏನೋ ಒಂದು ವರ್ಷದ ಕಾರ್ಯಕ್ರಮ ಬೇರೆ ಮಾಡುತ್ತಂತೆ ಸರ್ಕಾರ. ಗಾಂಧೀಜಿಯವರ ಸ್ಮರಣೆಯಲ್ಲಿ ಕಾರ್ಯಕ್ರಮ, ಆದರೆ ಅಲ್ಲಿ ಹಾಕಿರುವ ಕಟೌಟ್​ಗಳೆಲ್ಲ ಈಗಿನ ಗಾಂಧಿಗಳದ್ದು ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More