ತಾತನಾದ ಕುಮಾರಸ್ವಾಮಿ; ನಿಖಿಲ್-ರೇವತಿಗೆ ಗಂಡು ಮಗು
2020ರ ಏಪ್ರಿಲ್ನಲ್ಲಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ಡೌನ್ ನಿಯಮಗಳ ಅನುಸಾರ ಈ ಹೈಪ್ರೊಫೈಲ್ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.
ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
2020ರ ಏಪ್ರಿಲ್ನಲ್ಲಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ಡೌನ್ ನಿಯಮಗಳ ಅನುಸಾರ ಈ ಹೈಪ್ರೊಫೈಲ್ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್ಹೌಸ್ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.
ಇದನ್ನೂ ಓದಿ: ನಿಖಿಲ್-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

