ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಡಿಕೆ ಶಿವಕುಮಾರ್​ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಹಲವೆಡೆ ಅವಾಂತರ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಎಲ್ಲ ವಿಚಾರಗಳಲ್ಲೂ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಡಿಕೆ ಶಿವಕುಮಾರ್​ ವಿರುದ್ಧ ಕುಮಾರಸ್ವಾಮಿ ಕಿಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 06, 2024 | 1:23 PM

ಬೆಂಗಳೂರು, ಅಕ್ಟೋಬರ್​ 06: ನಗರದಲ್ಲಿ ರಾತ್ರಿ ಸುರಿದ ಮಳೆಯಿಂದ ಹಲವೆಡೆ ಅವಾಂತರಗಳು ಸಂಭವಿಸಿವೆ. ಅಕ್ಷರಶಃ ಜನರು ತತ್ತರಿಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಎಲ್ಲ ವಿಚಾರಗಳಲ್ಲೂ ಸರ್ಕಾರ ವಿಫಲವಾಗಿದೆ. ಮಳೆಯಿಂದಾಗಿ ಹಲವು ಮನೆಗಳು ಜಲಾವೃತಗೊಂಡಿವೆ. ರಾತ್ರಿ ಎಲ್ಲ ನಿದ್ದೆ ಇಲ್ಲದೆ ಜನರು ಪರದಾಟ ನಡೆಸಿದ್ದಾರೆ. ಗುಂಡಿ ಮುಚ್ಚಲು ಅದೇನೋ ಗಡುವು ನೀಡಿದ್ದಾರಲ್ಲ. ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ. ಜನರ ಸಮಸ್ಯೆಗಳ ಬಗ್ಗೆ ಈ ಸರ್ಕಾರ ಚಿಂತೆಯೇ ಇಲ್ಲ. ಇನ್ನು ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ದೇವರೇ ಕಾಪಾಡಬೇಕು ಎಂದು ತಿರುಗೇಟು ನೀಡಿದ್ದಾರೆ.

ಕೊಟ್ಟ ಕುದುರೆ ಏರಲಾರದ ಹೆಚ್.ಡಿ. ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಹೇಳುತ್ತಿದ್ದಾರೆ. ಯಾವ ಕುದುರೆ ಕೊಟ್ಟಿದ್ದರು. ನಾನು ಸಿಎಂ ಆಗಿದ್ದಾಗ 14 ತಿಂಗಳು ಮಾಡಿದ್ದ ಕೆಲಸವನ್ನು ಈ 15 ತಿಂಗಳಲ್ಲಿ ಸ್ವಂತ ಸರ್ಕಾರವನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಸವಾಲು ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.    

Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ