ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು ಎಂದ ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲೇ ಪ್ರತಿ ದಿನ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ತಪ್ಪಿಸಿರುವುದನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ದಲಿತರು ಯಾಕೆ ಸಿಎಂ ಆಗಿಲ್ಲ ಎಂದು ಕೇಳಿದ್ದಾರೆ.
ರಾಯಚೂರು, ಫೆಬ್ರವರಿ 22: ಮಲ್ಲಿಕಾರ್ಜುನ ಖರ್ಗೆ ಯಾವತ್ತೋ ಸಿಎಂ ಆಗ್ಬೇಕಿತ್ತು, ಡಾ.ಜಿ.ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು. ಆದರೆ ಅವರನ್ನು ದಿಲ್ಲಿಗೆ ಕಳುಹಿಸುವ ಮೂಲಕ ಅವಕಾಶ ತಪ್ಪಿಸಲಾಯಿತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಮಂತ್ರಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಏನಾದರೂ ಆದರೆ ಅದು ಕಾಂಗ್ರೆಸ್ ಪಕ್ಷದಲ್ಲೇ ಅಂತೆ. ಬೇರೆ ಪಕ್ಷದಲ್ಲಿ ಅವಕಾಶನೇ ಇಲ್ಲ. ದಲಿತರು ಆಗುವುದನ್ನ ತಪ್ಪಿಸಿರೋದೇ ಇವರು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

