ಚನ್ನಪಟ್ಟಣ ಬೈ ಎಲೆಕ್ಷನ್​ಗಾಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಗಿಫ್ಟ್​: ಎಚ್​ಡಿಕೆ ವಿರುದ್ಧ ಸ್ಫೋಟಕ ಆರೋಪ

ಚನ್ನಪಟ್ಟಣ ಬೈ ಎಲೆಕ್ಷನ್​ಗಾಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಗಿಫ್ಟ್​: ಎಚ್​ಡಿಕೆ ವಿರುದ್ಧ ಸ್ಫೋಟಕ ಆರೋಪ

ರಮೇಶ್ ಬಿ. ಜವಳಗೇರಾ
|

Updated on:Nov 18, 2024 | 2:52 PM

ಕರ್ನಾಟಕ ಕೃಷಿ ಖಾತೆ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಚನ್ನಪಟ್ಟಣ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕುಮಾರಸ್ವಾಮಿ ವಿರುದ್ಧ ಸಾವಿರಾರು ಕೋಟಿ ರೂಪಾಯಿ ಗಿಫ್ಟ್​ ಆರೋಪ ಮಾಡಿದ್ದಾರೆ.

ಮಂಡ್ಯ, (ನವೆಂಬರ್ 18): ಸಿಎಂ ಸಿದ್ದರಾಮಯ್ಯ ಸಿಡಿಸಿದ ಇದೇ 50 ಕೋಟಿ ಬಾಂಬ್ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಆಡಳಿತ ಪಕ್ಷದ ಪಕ್ಷ ಹಾಗೂ ವಿರೋಧ ಪಕ್ಷ ನಾಯಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಅತ್ತ ಬಿಜೆಪಿ ನಾಯಕರು, ಗಾಳಿಯಲ್ಲಿ ಗುಂಡು ಹೊಡೆಯೋದಲ್ಲ. ಸಾಕ್ಷಿ ಕೊಡಿ ಅಂತ ಸವಾಲು ಹಾಕುತ್ತಿದ್ದಾರೆ. ಇದೇ ಹೊತ್ತಲ್ಲಿ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಈಗ 100 ಕೋಟಿ ರೂ. ಸ್ಫೋಟಕ ಬಾಂಬ್ ಸಿಡಿಸಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ಸಾವಿರಾರು ಕೋಟಿ ರೂಪಾಯಿ ಗಿಫ್ಟ್​ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಕುಮಾರಸ್ವಾಮಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತೋ ಇಲ್ವೋ ಗೊತ್ತಿಲ್ಲ. ಮಗನ ಚುನಾವಣೆ ಮಗನ ಚುನಾವಣೆ ಎಂದು ಸಾಕಷ್ಟು ಗಿಫ್ಟ್ ಪಡೆದಿದ್ದಾರೆ. ಸಾಕಷ್ಟು ಕಂಪನಿ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣ ಪಡೆದಿರುವುದು ಸತ್ಯ. ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲಲ್ಲ. ಉಪ ಚುನಾವಣೆಯಲ್ಲಿ ದುಡ್ಡಿನಲ್ಲಿ ಅವರ ಜೊತೆ ಫೈಟ್ ಮಾಡಲಾಗಲಿಲ್ಲ. ಹಣದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್​ನವರ ಜೊತೆ ಹೋಲಿಕೆ ಸಾಧ್ಯವಿಲ್ಲ. ನಮ್ಮ ಬಳಿ ಹಣವಿಲ್ಲ, ಗ್ಯಾರಂಟಿ ನೀಡಿದ್ದೇವೆ ಎಂದು ಮನವಿ ಮಾಡಿದ್ದೇವೆ. 40 ಪರ್ಸೆಂಟ್ ಹಗರಣ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಹೋಯ್ತು. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತೆ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದರು.

Published on: Nov 18, 2024 02:45 PM