ಪ್ರಚಾರ ವೇಳೆ ಹೆಚ್​ಡಿ ಕುಮಾರಸ್ವಾಮಿಗೆ 50 ಸಾವಿರ ರೂ. ಚೆಕ್​ ನೀಡಿದ ಬಾಲಕಿ: ಹೇಳಿದ್ದೇನು ಗೊತ್ತಾ?

Updated on: Apr 28, 2023 | 11:06 PM

ಯಶವಂತಪುರ ಕ್ಷೇತ್ರದಲ್ಲಿ ಶುಕ್ರವಾರ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಪರ ಕುಮಾರಸ್ವಾಮಿ ಮತಯಾಚನೆ ಮಾಡಿದರು. ಈ ವೇಳೆ ತಾತಗುಣಿ ಏರಿಯಾದಲ್ಲಿ ಚುನಾವಣಾ ಖರ್ಚಿಗಾಗಿ ಬಾಲಕಿಯೊಬ್ಬಳು ₹50,000 ರೂ. ಚೆಕ್ ನೀಡಿದ್ದಾಳೆ.

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಶುಕ್ರವಾರ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಪರ ಕುಮಾರಸ್ವಾಮಿ ಮತಯಾಚನೆ ಮಾಡಿದರು. ಈ ವೇಳೆ ತಾತಗುಣಿ ಏರಿಯಾದಲ್ಲಿ ಚುನಾವಣಾ ಖರ್ಚಿಗಾಗಿ ಬಾಲಕಿಯೊಬ್ಬಳು ₹50,000 ರೂ. ಚೆಕ್ ನೀಡಿದ್ದಾಳೆ. ದೇಣಿಗೆ ನೀಡುವುದರೊಂದಿಗೆ ಕರ್ನಾಟಕದಲ್ಲಿ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಬೇಡಿಕೆಯನ್ನು ಬಾಲಕಿ ಇಟ್ಟಿದ್ದು, ಅದನ್ನ ಕೇಳಿ ಸ್ವತಃ ಹೆಚ್​.ಡಿ ಕುಮಾರಸ್ವಾಮಿ ಅವರು ಫಿದಾ ಆಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published on: Apr 28, 2023 11:06 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More