ಸಕ್ಕರೆ ನಾಡಲ್ಲಿ ಪ್ರತಿಮೆ ಪಾಲಿಟಿಕ್ಸ್; ಶಿವಕುಮಾರ ಸ್ವಾಮೀಜಿ ಪುತ್ಥಳಿ ಬೆನ್ನಲ್ಲೇ ಹೆಚ್ಡಿಕೆಯಿಂದ ಬಸವಣ್ಣನ ಪುತ್ಥಳಿ ಅನಾವರಣ
ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಚಳ್ಳಿ ಗ್ರಾಮದಲ್ಲಿಂದು ಜೆಡಿಎಸ್ನಿಂದ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ.
ಮಂಡ್ಯ: ಜಿಲ್ಲೆಯಲ್ಲಿ ಲಿಂಗಾಯತರ ಮತ ಸೆಳೆಯಲು ಪ್ರತಿಮೆ ಪಾಲಿಟಿಕ್ಸ್ ಜೋರಾಗಿದೆ. ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಚಳ್ಳಿ ಗ್ರಾಮದಲ್ಲಿಂದು ಜೆಡಿಎಸ್ನಿಂದ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. 20 ದಿನದ ಹಿಂದೆ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ ಆಗಿತ್ತು. ಇದರ ಬೆನ್ನಲ್ಲೇ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿ ಡಾ.ಇಂದ್ರೇಶ್ ನಿರ್ಮಾಣ ಮಾಡಿಸಿದ್ದ ಪುತ್ಥಳಿ ಶಿವಕುಮಾರ ಸ್ವಾಮೀಜಿ ಪುತ್ಥಳಿಯನ್ನು ವಿಜಯೇಂದ್ರ ಉದ್ಘಾಟಿಸಿದ್ದರು. ಇಂದು ಹೆಚ್ಡಿ ಕುಮಾರಸ್ವಾಮಿ ಬಸವಣ್ಣನ ಪುತ್ಥಳಿ ಅನಾವರಣ ಮಾಡಲಿದ್ದಾರೆ.
Published on: Mar 19, 2023 10:23 AM