ಜೆಡಿಎಸ್-ಬಿಜೆಪಿ ಮೈತ್ರಿ: ದೆಹಲಿಯಲ್ಲಿ ಇಂದು ಸಾಯಂಕಾಲ ಬಿಜೆಪಿ ವರಿಷ್ಠರೊಂದಿಗೆ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ

|

Updated on: Sep 21, 2023 | 10:55 AM

ತಮ್ಮ ಭೇಟಿಯ ನಂತರ ಅವಶ್ಯಕತೆ ಅನಿಸಿದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ನಡುವೆ ಮಾತುಕತೆ ನಡೆಯಲಿದೆ ಎಂದು ಚನ್ನಪಟ್ಟಣ ಶಾಸಕ ಹೇಳಿದರು. ಸಭೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆ ಸಂದರ್ಭದಲ್ಲಿನ ಸ್ಥಿತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಅವಲೋಕನ ನಡೆಸಲಾಗುವುದು ಅಂತ ಅವರು ಹೇಳಿದರು.

ಬೆಂಗಳೂರು: ನಿನ್ನೆ ರಾಮನಗರದಲ್ಲಿ ಹೇಳಿದ ಹಾಗೆ ಜೆಡಿಎಸ್ ಧುರೀಣ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ದೆಹಲಿಗೆ ತೆರಳಿ ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ಜೊತೆ ಮೈತ್ರಿ ಬೆಳೆಸುವುದಕ್ಕೆ ಸಂಬಂಧಿಸಿದಂತೆ ಆ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕುಮಾರಸ್ವಾಮಿ, ಸ್ಥಾನಗಳನ್ನು ಹಂಚಿಕೊಳ್ಳುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ, ಇವತ್ತು ಅಮಿತ್ ಶಾ (Amit Shah) ಮತ್ತು ಜೆಪಿ ನಡ್ಡಾ (JP Nadda) ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತುಕತೆಯ ವಿವರಗಳನ್ನು ದೆಹಲಿಯ ಕನ್ನಡ ಮಾಧ್ಯಮ ಪ್ರತಿನಧಿಗಳೊಂದಿಗೆ ಹಂಚಿಕೊಳ್ಳುವುದಾಗಿ ಹೇಳಿದರು. ತಮ್ಮ ಭೇಟಿಯ ನಂತರ ಅವಶ್ಯಕತೆ ಅನಿಸಿದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ನಡುವೆ ಮಾತುಕತೆ ನಡೆಯಲಿದೆ ಎಂದು ಚೆನ್ನಪಟ್ಟಣ ಶಾಸಕ ಹೇಳಿದರು. ಸಭೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆ ಸಂದರ್ಭದಲ್ಲಿನ ಸ್ಥಿತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಅವಲೋಕನ ನಡೆಸಲಾಗುವುದು ಅಂತ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ