ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ: ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಮುಖ್ಯಾಂಶಗಳು
- ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ ವಿಚಾರವಾಗಿ ಹೆಚ್ಡಿ ಕುಮಾರಸ್ವಾಮಿ ಪ್ರಕ್ರಿಯೆ
- ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ
- ಚಪ್ಪಲಿ ಎಸೆಯುವುದು ನಮ್ಮ ಸಂಸ್ಕೃತಿ ಅಲ್ಲ
ಚಿಕ್ಕಬಳ್ಳಾಪುರ ಘಟನೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ. ಕುಮಾರಸ್ವಾಮಿ, ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆಗಳಿಗೆ ಉದ್ರೇಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಚಪ್ಪಲಿ ತೂರುವಿಕೆ ನಮ್ಮ ಸಂಸ್ಕೃತಿಯಲ್ಲ, ಶಾಂತಚಿತ್ತರಾಗಿರಬೇಕು. ಸಮಾಜದಲ್ಲಿ ಅಶಾಂತಿಗೆ ಅವಕಾಶ ನೀಡಬೇಡಿ ಎಂದ ಅವರು, ಚರ್ಚೆಗೆ ಸಿದ್ಧ ಎಂದು ಪತ್ರ ಬರೆದಿರುವುದಾಗಿ ತಿಳಿಸಿದರು.
ಬೆಂಗಳೂರು, ಜೂನ್ 28: ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ. ಪ್ರಚೋದನೆ ಮಾಡಲೆಂದೇ ಒಂದು ಗುಂಪು ಕೆಲಸ ಮಾಡುತ್ತಿದೆ. ಹೀಗಾಗಿ ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ. ಚಪ್ಪಲಿ ಎಸೆಯುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರ ವಿರುದ್ಧವೂ ಧಿಕ್ಕಾರ ಕೂಗುವುದು ಬೇಡ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವುದು ಬೇಡ. ಇಂಥ ಸಂದರ್ಭದಲ್ಲಿ ಶಾಂತಚಿತ್ತದಿಂದ ಇರುವಂತೆ ಮನವಿ ಮಾಡಿದರು. ಇನ್ನು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ನಡವಳಿಕೆಗೆ ನನ್ನ ನಮಸ್ಕಾರ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
