12 ಲಕ್ಷ ಸಾಲಬಾಧೆಯಿಂದ ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ

Edited By:

Updated on: Jul 31, 2026 | 7:09 PM

Mandya News: ಮಂಡ್ಯ ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ 11-12 ಲಕ್ಷ ರೂಪಾಯಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಪತಿ ಮೀಸೆ ಪುಟ್ಟಸ್ವಾಮಿ ಹಾಗೂ ಪತ್ನಿ ನಾಗಮ್ಮ ಅವರ ಕುಟುಂಬಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಂದ ಸಾಲದ ಬಗ್ಗೆ ಮಾಹಿತಿ ಪಡೆದರು.

ಮಂಡ್ಯ, ಜುಲೈ 31: ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಪ್ರಾಣ ಕಳೆದುಕೊಂಡಿರುವ ಘಟನೆ ನಡೆದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತ ದಂಪತಿಯ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ರೈತ ದಂಪತಿ 11 ರಿಂದ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 90,000 ರೂ. ಸಾಲವಿದ್ದು, ಇತರೆ ಬ್ಯಾಂಕ್‌ಗಳಲ್ಲಿ, ಮುಖ್ಯವಾಗಿ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲೂ ಸಾಲವಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಕೃಷಿ ಉದ್ದೇಶಗಳಿಗಾಗಿ ಈ ಸಾಲವನ್ನು ಪಡೆಯಲಾಗಿತ್ತು ಎನ್ನಲಾಗಿದೆ. ಸಾಲದ ನೋಟಿಸ್‌ಗಳಿಂದ ಮನನೊಂದು ದಂಪತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 31, 2026 07:09 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More