AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೋಲ ಕಲ್ಲೋಲ ಹೇಳಿಕೆ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಹೆಚ್​​.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವ ಹೇಳಿದ್ದಿಷ್ಟು

ಅಲ್ಲೋಲ ಕಲ್ಲೋಲ ಹೇಳಿಕೆ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಹೆಚ್​​.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವ ಹೇಳಿದ್ದಿಷ್ಟು

ಮಂಜುನಾಥ ಕೆಬಿ
| Edited By: |

Updated on: Sep 15, 2026 | 1:27 PM

Share

ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಹಲವು ಅಕ್ರಮಗಳ ಆರೋಪ ಮಾಡಿದ್ದಾರೆ. ಕೆಪಿಎಸ್‌ಸಿ ಮತ್ತು ಎಇ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳನ್ನು ಉಲ್ಲೇಖಿಸಿ, ಈ ಬಗ್ಗೆ ದಾಖಲೆಗಳನ್ನು ಜನತೆಯ ಮುಂದಿಡುತ್ತೇನೆ ಎಂದಿದ್ದಾರೆ. ತಮ್ಮ ಟೀಕೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಜಾತಿ ಆಧಾರಿತವಲ್ಲ, ಬದಲಿಗೆ ರಾಜ್ಯದ ಹಿತಕ್ಕಾಗಿ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ, ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಪುನರುಚ್ಛರಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ. ಈಗಿರುವ ಸರ್ಕಾರದ ಮಂತ್ರಿಗಳ ಅಡಿಯೇ ಕೆಪಿಎಸ್​​ಸಿ, ಎಇಇ ಹಗರಣಗಳು ನಡೆದಿವೆ. ಲಕ್ಷಾಂತರ ಯುವಕರ ಭಾವನೆಗಳನ್ನು ಮಾರಾಟಕ್ಕಿಟ್ಟು ವಸೂಲಿ ಮಾಡಲಾಗಿದೆ. ಇದ್ಯಾವುದನ್ನೂ ನಾನು ಹೇಳುತ್ತಿಲ್ಲ. ದಾಖಲೆಗಳು ಹೇಳುತ್ತಿವೆ. ಅಕ್ರಮಗಳನ್ನ ಜನರ ಮುಂದಿಡುವುದು ನನ್ನ ಜವಾಬ್ದಾರಿ. ತೀರ್ಮಾನ ಜನರದ್ದು ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More