ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿ; ರಾಜ್ಯದ ಜನರಿಗೆ ಕೊಟ್ಟ ಭರವಸೆ ಏನು?
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸದರು. ಬಳಿಕ ಮಾತನಾಡಿದ ಅವರು, ‘ ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ ಎಂದರು.
ಬೆಂಗಳೂರು, ಜೂ.14: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸದರು. ಬಳಿಕ ಮಾತನಾಡಿದ ಅವರು, ‘ ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಎಂದರು.
ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ
ಇದೇ ವೇಳೆ ಜೆಡಿಎಸ್ ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ, ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಅದರಲ್ಲೂ ಒಂದು ದಿನ ಮಂಡ್ಯದಲ್ಲಿ ಇರುತ್ತೇನೆ. ಜೊತೆಗೆ ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ. ರಾಜ್ಯದ ಅಭಿವೃದ್ಧಿ ಮಾಡಿದ ಮೇಲೆ ನಾನು ಸನ್ಮಾನ ಸ್ವೀಕರಿಸಿಸುತ್ತೆನೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ