ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿ; ರಾಜ್ಯದ ಜನರಿಗೆ ಕೊಟ್ಟ ಭರವಸೆ ಏನು?

|

Updated on: Jun 14, 2024 | 2:51 PM

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸದರು. ಬಳಿಕ ಮಾತನಾಡಿದ ಅವರು, ‘ ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ ಎಂದರು.

ಬೆಂಗಳೂರು, ಜೂ.14: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸದರು. ಬಳಿಕ ಮಾತನಾಡಿದ ಅವರು, ‘ ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಎಂದರು.

ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ

ಇದೇ ವೇಳೆ ಜೆಡಿಎಸ್​ ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ, ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಅದರಲ್ಲೂ ಒಂದು ದಿನ ಮಂಡ್ಯದಲ್ಲಿ ಇರುತ್ತೇನೆ. ಜೊತೆಗೆ ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ. ರಾಜ್ಯದ ಅಭಿವೃದ್ಧಿ ಮಾಡಿದ ಮೇಲೆ ನಾನು ಸನ್ಮಾನ ಸ್ವೀಕರಿಸಿಸುತ್ತೆನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 14, 2024 02:47 PM