ಕೇಂದ್ರ ಸಚಿವರಾದ ಬಳಿಕ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಆ್ಯಪಲ್, ಮೂಸಂಬಿ ಹಾರ ಹಾಕಿ ಭರ್ಜರಿ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಹೆಚ್ಡಿ ಕುಮಾರಸ್ವಾಮಿಗೆ ಕಾರ್ಯಕರ್ತರು ಹಾಗೂ ಜೆಡಿಎಸ್ ನಾಯಕರು ಭರ್ಜರಿ ಸ್ವಾಗತ ಕೋರಿದರು. ಆ್ಯಪಲ್, ಮೂಸಂಬಿ ಹಾರ ಹಾಕಿ ಅವರನ್ನು ಸ್ವಾಗತಿಸಲಾಯಿತು. ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಕೋರಿದ ಭರ್ಜರಿ ಸ್ವಾಗತದ ವಿಡಿಯೋ ಇಲ್ಲಿದೆ.
ಬೆಂಗಳೂರು, ಜೂನ್ 14: ಕೇಂದ್ರದ ಎನ್ಡಿಎ ಸರ್ಕಾರದಲ್ಲಿ (NDA Government) ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಹೆಚ್ಡಿ ಕುಮಾರಸ್ವಾಮಿಗೆ (HD Kumaraswamy) ಜೆಡಿಎಸ್ (JDS) ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರೆಯಿತು. ಕುಮಾರಸ್ವಾಮಿ ಅವರನ್ನು ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ಸಂಸದ ಮಲ್ಲೇಶ್ ಬಾಬು, ನಿಸರ್ಗ ನಾರಾಯಣಸ್ವಾಮಿ ಸ್ವಾಗತಿಸಿದರು. ಇದೇ ವೇಳೆ ಆ್ಯಪಲ್, ಮೂಸಂಬಿ ಹಾರ ಹಾಕಿ ಸ್ವಾಗತ ಕೋರಲಾಯಿತು.
ಬಳಿಕ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ. ಜೆಡಿಎಸ್ ಮುಗಿಸಿದ್ದೇವೆ ಎಂದು ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದರು.
ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ಎಂದರು.
ಇದನ್ನೂ ಓದಿ: ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ
ಅಲ್ಲದೆ, ಸೋಲಿನ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
