ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಖಡಕ್ ಮಾತು
ಗಂಗೇನಹಳ್ಳಿ ಡಿನೋಟಿಫಿಕೇಷನ್ ಸಂಬಂಧ ಲೋಕಾಯುಕ್ತ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಚಾರಣೆ ಅಂತ್ಯವಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 27: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸತತ ಒಂದುವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ. 2015ರಲ್ಲಿ ಸರ್ಕಾರದ ಹಲವು ಪ್ರಕರಣಗಳನ್ನ ಪ್ರಸ್ತಾಪಿಸಿದ್ದೆ. ಹೀಗಾಗಿ ನನ್ನ ವಿರುದ್ಧ ನನ್ನ ಕೇಸ್ ಹಾಕಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನನ್ನ ಕರೆದಿದ್ದರು, ಬಂದಿದ್ದೇನೆ ಎಂದರು. ಇನ್ನು ಈ ಬಗ್ಗೆ ಸುದೀರ್ಘವಾಗಿ ಮಾತನಾಡಲು ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಡಿನೋಟಿಫಿಕೇಷನ್ ಆರೋಪದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.