ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಖಡಕ್ ಮಾತು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 27, 2024 | 8:20 PM

ಗಂಗೇನಹಳ್ಳಿ ಡಿನೋಟಿಫಿಕೇಷನ್ ಸಂಬಂಧ ಲೋಕಾಯುಕ್ತ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಚಾರಣೆ ಅಂತ್ಯವಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 27: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸತತ ಒಂದುವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ. 2015ರಲ್ಲಿ ಸರ್ಕಾರದ ಹಲವು ಪ್ರಕರಣಗಳನ್ನ ಪ್ರಸ್ತಾಪಿಸಿದ್ದೆ. ಹೀಗಾಗಿ ನನ್ನ ವಿರುದ್ಧ ನನ್ನ ಕೇಸ್​ ಹಾಕಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನನ್ನ ಕರೆದಿದ್ದರು, ಬಂದಿದ್ದೇನೆ ಎಂದರು. ಇನ್ನು ಈ ಬಗ್ಗೆ ಸುದೀರ್ಘವಾಗಿ ಮಾತನಾಡಲು ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಡಿನೋಟಿಫಿಕೇಷನ್ ಆರೋಪದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on